Sunday, November 3, 2024

ಬ್ಯಾಂಕ್‌ ಆಫ್‌ ಬರೋಡಾದ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಸಚಿನ್‌ ತೆಂಡೂಲ್ಕರ್‌ ನೇಮಕ !

ಜನಪ್ರತಿನಿಧಿ (ಬೆಂಗಳೂರು) : ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದೇವರು ಎಂದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ ಭಾರತ ರತ್ನ ಸಚಿನ್ ತೆಂಡೂಲ್ಕರ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ.

ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್‌ ಬರೋಡಾ ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನ ಛಾಪು ಮೂಡಿಸಿದೆ. ಸಚಿನ್ ತೆಂಡೂಲ್ಕರನ್ನು ಬ್ಯಾಂಕ್‌ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡುವ ಮೂಲಕ ಇನ್ನಷ್ಟು ವೇಗವಾಗಿ ತನ್ನ ಬೆಳವಣಿಗೆಯನ್ನು ತೋರ್ಪಡಿಸಿದೆ. ಈ ಮೂಲಕ ಜಗತ್ತಿನಾದ್ಯಂತ ಬ್ಯಾಂಕ್‌ ಆಫ್‌ ಬರೋಡಾ ತನ್ನ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಸಾಧ್ಯವಾಗಿದೆ. ಸಚಿನ್ ಜೊತೆ ಈ ಒಡಂಬಡಿಕೆ ಮಾಡಿಕೊಂಡಿರುವ ಬ್ಯಾಂಕ್ ಆಫ್‌ ಬರೋಡಾ ಇದನ್ನು “ಪ್ಲೇ ದಿ ಮಾಸ್ಟರ್‌ ಸ್ಟ್ರೋಕ್‌” ಎಂದು ಉಲ್ಲೇಖಿಸಿದೆ.

ಶತಮಾನಗಳ ಇತಿಹಾಸ ಹೊಂದಿರುವ ಬ್ಯಾಂಕ್ ಆಗಿ ಲಕ್ಷಾಂತರ ಜನರ ವಿಶ್ವಾಸವನ್ನು ಬ್ಯಾಂಕ್ ಆಫ್ ಬರೋಡಾ ಪಡೆದುಕೊಂಡಿದೆ.ಇದೀಗ ಸಚಿನ್ ತೆಂಡೂಲ್ಕರ್‌ ಅವರು ಬ್ಯಾಂಕ್‌ನ ಬ್ರಾಂಡ್ ಅಂಬಾಸಿಡರ್ ಆಗುವ ಮೂಲಕ ಬ್ಯಾಂಕ್ ಇನ್ನಷ್ಟು ಗ್ರಾಹಕರನ್ನು ಸೆಳೆಯಲಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್‌ ತೆಂಡೂಲ್ಕರ್, ಹಲವು ಜಾಗೃತಿ ಕಾರ್ಯಕ್ರಮಗಳಲ್ಲಿ, ಗ್ರಾಹಕ ಮತ್ತು ಉದ್ಯೋಗಿಗಳ ಜೊತೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 17 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್ ಆಫ್‌ ಬರೋಡಾವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಚಿನ್ ತೆಂಡೂಲ್ಕರ್ ಅವರಿಗೆ ಇರುವ ಕೀರ್ತಿ ಸಹಾಯವಾಗಲಿದೆ ಎಂದು ಪ್ರಕಟಣೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಚಿನ್ ಬ್ರ್ಯಾಂಡಿಂಗ್ ಪ್ರಚಾರಗಳು, ಗ್ರಾಹಕರ ಶಿಕ್ಷಣ ಮತ್ತು ಆರ್ಥಿಕ ಸಾಕ್ಷರತಾ ಕಾರ್ಯಕ್ರಮಗಳು ಮತ್ತು ವಂಚನೆ ತಡೆಗಟ್ಟುವಿಕೆ ಮತ್ತು ಜಾಗೃತಿ ಅಭಿಯಾನಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಬ್ಯಾಂಕ್ ಆಫ್ ಬರೋಡಾ 17 ದೇಶಗಳಲ್ಲಿ ತನ್ನ ಶಾಖೆಯನ್ನು ಹೊಂದಿದ್ದು, ಸಚಿನ್‌ ಬ್ಯಾಂಕ್‌ ಪ್ರಚಾರ ರಾಯಭಾರಿ ಆಗಿದ್ದರಿಂದ ಸಂಸ್ಥೆ ಹೆಚ್ಚಿನ ಎತ್ತರಕ್ಕೆ ಬೆಳೆಯಲು ಸಹಾಯವಾಗಲಿದೆ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!