spot_img
Wednesday, April 1, 2026
spot_img

ಗಂಗೊಳ್ಳಿ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ

ಗಂಗೊಳ್ಳಿ : ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 50ನೇ ವರ್ಷದ ಸುವರ್ಣ ಮಹೋತ್ಸವ-2024 ಸಮಾರಂಭ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಬುಧವಾರ ಆರಂಭಗೊಂಡಿದೆ.

ಶ್ರೀ ಶಾರದಾ ದೇವಿಯ ವಿಗ್ರಹವನ್ನು ತ್ರಾಸಿಯಿಂದ ಬೃಹತ್ ಬೈಕ್ ಜಾಥಾ ಮೂಲಕ ತಂದು ಶ್ರೀ ರಾಮ ಮಂದಿರದಿಂದ ವಿವಿಧ ವಾದ್ಯಘೋಷ, ಅದ್ದೂರಿ ಚಂಡೆವಾದನ, ಹುಲಿವೇಷ ಘರ್ಜನೆ, ಕುಣಿತ ಭಜನಾ ತಂಡದ ಮೂಲಕ ಪೂರ್ಣಕುಂಭ ಸ್ವಾಗತದ ಮೂಲಕ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಪುರೋಹಿತರಾದ ಜಿ. ರಾಘವೇಂದ್ರ ನಾರಾಯಣ ಆಚಾರ್ಯರ ನೇತೃತ್ವದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಪ್ರತಿಷ್ಠಾಪನೆ ಬಳಿಕ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ಬೆಳ್ಳಿಯ ವೀಣೆ ಮತ್ತು ಎಂ.ಜಿ.ಸುಭಾಶ್ ಭಂಡಾರ್‌ಕಾರ್ ಅವರು ಸೇವಾರೂಪದಲ್ಲಿ ನೀಡಿದ ಬೆಳ್ಳಿಯ ತ್ರಿಶೂಲವನ್ನು ಶ್ರೀದೇವಿಗೆ ಸಮರ್ಪಣೆ ಮಾಡಲಾಯಿತು. ಬಳಿಕ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಮಿತಿಯ ಅಧ್ಯಕ್ಷ ಸತೀಶ್ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಸುವರ್ಣ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಪದಾಧಿಕಾರಿಗಳು ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!