spot_img
Wednesday, April 1, 2026
spot_img

ಬಿ.ಬಿ ಹೆಗ್ಡೆ ಕಾಲೇಜು : ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ (ಅ.09): ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಎ.ಎಸ್.ಎನ್. ಹೆಬ್ಬಾರ್ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕುಂದಗನ್ನಡ ಭಾಷೆಯ ಅನನ್ಯತೆ ಮತ್ತು ಇಲ್ಲಿನ ಸಂಸ್ಕೃತಿಯ ಅಸ್ಮಿತೆಯನ್ನು ಉಳಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ಪ್ರವೀಣಾ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಶ್ಮಿತಾ ಸ್ವಾಗತಿಸಿ, ವಿಸ್ಮಿತಾ ಅತಿಥಿಗಳನ್ನು ಪರಿಚಯಿಸಿ, ಗಗನ್ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!