spot_img
Wednesday, January 22, 2025
spot_img

ರತನ್‌ ಟಾಟಾ ನಿಧನ | ಮುಂಬೈನಲ್ಲಿ ಇಂದು ಅಪರಾಹ್ನದವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಜನಪ್ರತಿನಿಧಿ (ಮುಂಬೈ) : ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ(ಬುಧವಾರ) ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅಸ್ತಂಗತರಾಗಿದ್ದು, ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು, ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾದಂತಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು(ಗುರುವಾರ) ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಲ್ಲಿ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚುವರಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ಮಾಹಿತಿ ನೀಡಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

VIDEO | Veteran industrialist Ratan Tata died at a Mumbai hospital late on Wednesday night.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!