spot_img
Thursday, March 19, 2026
spot_img

ಕುಂದಾಪುರ ತಾಲೂಕು ಪಂಚಾಯತಿ ಅಧ್ಯಕ್ಷರಾಗಿ ಇಂದಿರಾ ಶೆಟ್ಟಿ ಅವಿರೋಧ ಆಯ್ಕೆ

 


ಕುಂದಾಪುರ, ಆ.11: ಕುಂದಾಪುರ ತಾಲೂಕು ಪಂಚಾಯತಿಯ ನೂತನ ಅಧ್ಯಕ್ಷರಾಗಿ ಇಂದಿರಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಆ.11ರಂದು ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಅಧ್ಯಕ್ಷರಾಗಿ ಆಯ್ಕೆಯಾದರು.

ಬೈಂದೂರು ತಾಲೂಕು ಪಂಚಾಯತಿ ನೂತನವಾಗಿ ರಚನೆಗೊಂಡಿದ್ದರಿಂದ ಕುಂದಾಪುರ ತಾಲೂಕು ಪಂಚಾಯಿತಿ ವಿಭಜನೆಗೊಂಡಿದ್ದು ಉಭಯ ತಾಲೂಕು ಪಂಚಾಯಿತಿಗಳಿಗೂ ಹೊಸ ಆಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಗೊಂಡಿತ್ತು.

ನೂತನ ಅಧ್ಯಕ್ಷರಾಗಿರುವ ಇಂದಿರಾ ಶೆಟ್ಟಿ ಆಲೂರು ತಾ.ಪಂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಹಿಂದೆ ವಂಡ್ಸೆ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಉಪಾಧ್ಯಕ್ಷರಾಗಿ ರಾಮ್ ಕಿಶನ್ ಹೆಗ್ಡೆ ಮುಂದುವರಿಯಲಿದ್ದಾರೆ.

ಸಹಾಯಕ ಆಯುಕ್ತ ರಾಜು ಕೆ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ತಾಲೂಕು ಪಂಚಾಯತಿ ಉಪಾಧ್ಯಕ್ಷ ರಾಮ್ ಕಿಶನ್ ಹೆಗ್ಡೆ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರೂಪಾ ಪೈ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.  ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಹಾಜರಿದ್ದರು.

ಈ ಹಿಂದೆ ಒಟ್ಟು 37 ಸದಸ್ಯ ಬಲವಿದ್ದ ಕುಂದಾಪುರ ತಾಲೂಕು ಪಂಚಾಯಿತಿಯಲ್ಲಿ 14 ಸದಸ್ಯರು ಬೈಂದೂರು ತಾಲೂಕು ಪಂಚಾಯತಿಗೂ, ಒಬ್ಬರು ಹೆಬ್ರಿ ತಾಲೂಕು ಪಂಚಾಯತಿಗೂ ಸೇರಿರುವುದರಿಂದ ಕುಂದಾಪುರ ತಾಲೂಕು ಪಂಚಾಯತಿಯಲ್ಲಿ 22 ಸದಸ್ಯರಿದ್ದಾರೆ. 22 ಸದಸ್ಯರ ಪೈಕಿ 16 ಬಿಜೆಪಿ, 6 ಕಾಂಗ್ರೆಸ್ ಸದಸ್ಯರು ಇದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!