spot_img
Wednesday, April 1, 2026
spot_img

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ  ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!