Friday, October 18, 2024

ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು : ಕೇಂದ್ರದ ವಿರುದ್ಧ ರಾಹುಲ್‌ ಆಕ್ರೋಶ

ಜನಪ್ರತಿನಿಧಿ (ಚೆನ್ನೈ) : ತಮಿಳುನಾಡಿನ ತಿರುವಳ್ಳುವರ್‌ ಜಿಲ್ಲೆಯ ಕಾವರೈಪೇಟೈ ಸಮೀಪದಲ್ಲಿ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ಮಾಡಿದ್ದಾರೆ.

ನಿನ್ನೆ (ಶುಕ್ರವಾರ) ರಾತ್ರಿ ಮೈಸೂರು ದರ್ಭಾಂಗ ಭಾಗ್‌ಮತಿ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ ಡಿಕ್ಕಿಯಾಗಿ ಸುಮಾರು ೧೯ ಮಂದಿ ಗಾಯಗೊಂಡಿದ್ದರು. ೧೨ ಬೋಗಿಗಳು ಹಳಿ ತಪ್ಪಿದ್ದವಯ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಎಕ್ಸ್‌ ಖಾತೆತಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ. ಈ ಅವಘಡವು ಒಡಿಶಾಸ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ ನೆನಪಿಸುವಂತಿದೆ ಎಂದು ಹೇಳಿದ್ದಾರೆ.

ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉತ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಬಗಳು ಬಲಿಯಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ ಎರಡು ಪ್ರಯಾಣಿಕ ರೈಲುಗಳು ಹಾಗೂ ಸರಕು ಸಾಗಣೆ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ೨೯೩ ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ೧,೨೦೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!