Friday, October 18, 2024

ಉಡುಪಿಯಲ್ಲಿ ಅಕ್ರಮವಾಗಿ ತಂಗಿದ್ದ ಬಾಂಗ್ಲಾ ಪ್ರಜೆಗಳು : ಪ್ರಕರಣ ದಾಖಲು !

ಜನಪ್ರತಿನಿಧಿ (ಉಡುಪಿ) : ಸರ್ಕಾರದಿಂದ ಮಾನ್ಯತೆ ಹೊಂದಿರುವ ಪಾಸ್‌ಪೋರ್ಟ್ ಹಾಗೂ ವೀಸಾ ಗಳಿಲ್ಲದೆ ಭಾರತದ ವಿವಿಧ ಪ್ರದೇಶಗಳಲ್ಲಿ ತಂಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಹೂಡೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ತಂಗಿದ್ದ ವಿದೇಶಿ ಪ್ರಜೆಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು, ಎಂಟು ಆರೋಪಿಗಳ ಪೈಕಿ ಮೊಹಮ್ಮದ್ ಮಾಣಿಕ್ ಎಂಬಾತ ನಕಲಿ ಪಾಸ್‌ಪೋರ್ಟ್ ಬಳಸಿ ಹೂಡೆಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಪರಾರಿಯಾಗಲು ಯತ್ನಿಸಿದ್ದ ಎಂದು ತಿಳಿದ್ದಾರೆ.

ವಲಸೆ ಅಧಿಕಾರಿಗಳು ಆತನನ್ನು ಅನುಮಾನಿಸಿ ನೆರೆಯ ದ.ಕ.ಜಿಲ್ಲೆಯ ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಚಾರಣೆ ನಡೆಸಿದಾಗ ಬಾಂಗ್ಲಾದೇಶದ ಇತರ ಏಳು ಮಂದಿ ಉಡುಪಿಯ ಹೂಡೆಯಲ್ಲಿ ಅಕ್ರಮವಾಗಿ ತನ್ನೊಂದಿಗೆ ತಂಗಿದ್ದರು ಎಂದು ಹೇಳಿಕೊಂಡಿರುವುದಾಗಿ ತಿಳಿದು ಬಂದಿದೆ.

ವಲಸೆ ಅಧಿಕಾರಿಗಳು ಉಡುಪಿ ಪೊಲೀಸರಿಗೆ ಈ ಮಾಹಿತಿ ನೀಡಿದ್ದಾರೆ. ಮಲ್ಪೆ ಪೊಲೀಸರು ನಿನ್ನೆ ಹೂಡೆಯಲ್ಲಿ ಅಕ್ರಮವಾಗಿ ತಂಗಿದ್ದ ಏಳು ಬಾಂಗ್ಲಾದೇಶಿ ಪ್ರಜೆಗಳ ಸ್ಥಳವನ್ನು ಪರಿಶೀಲಿಸಲು ಹೋದಾಗ, ವಶಕ್ಕೆ ಪಡೆದು ವಿಚಾರಣೆ ಪ್ರಾರಂಭಿಸಿದರು.

ಪೊಲೀಸರು ನಡೆಸಿದ ತನಿಖೆಯಲ್ಲಿ ಏಳು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದರು ಎಂಬ ವಿಷಯ ಗೊತ್ತಾಗಿದ್ದು, ಇವರಿಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ಯಾರು ಮಾಡಿಕೊಟ್ಟರು ಮತ್ತು ಆರೋಪಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಹೇಗೆ ಗಡಿ ದಾಟಿ ಬಂದರು ಎನ್ನುವುದು ವಿಚಾರಣೆ, ತನಿಖೆಯಿಂದಲೇ ತಿಳಿದುಬರಬೇಕಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಸದ್ಯ, ಮಲ್ಪೆ ಪೊಲೀಸರು ಏಳು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಏಳು ಆರೋಪಿಗಳು ಪೊಲೀಸ್ ವಶದಲ್ಲಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!