Sunday, November 3, 2024

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳು : ತನಿಖೆ ಚುರುಕುಗೊಳಿಸಿದ ಉಡುಪಿ ಪೊಲೀಸರು !

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯ ಹೂಡೆ ಬಳಿಯ ಸಣ್ಣ ಮನೆಯೊಂದರಲ್ಲಿ ತಂಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಮೊನ್ನೆಯಷ್ಟೇ ಬಂಧಿಸಿದ ಬಳಿಕ ಪೊಲೀಸರು ಘಟನೆಯ ತನಿಖೆಯನ್ನು ಕೈಗೊಂಡಿದ್ದಾರೆ.

ಭಾರತ-ಬಾಂಗ್ಲಾದೇಶದ ಉದ್ದಕ್ಕೂ ಬೇಲಿಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡದ ಕಾರಣ ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಈಶಾನ್ಯ ಪ್ರದೇಶದ ಏಜೆಂಟರ ಸಹಾಯದಿಂದ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿವೆ.

ಸ್ಥಳೀಯರು ಅವರಿಗೆ ಪ್ರೋತ್ಸಾಹ ನೀಡಿದರು ಎಂದು ಮೂಲಗಳು ಮಾಹಿತಿ ನೀಡಿದ್ದು, ಅವರು ವಿವಿಧ ಸಮಯಗಳಲ್ಲಿ ಭಾರತವನ್ನು ಪ್ರವೇಶಿಸಿ, ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿದ್ದರು ಹಾಗೂ ಹತ್ತಿರದ ಮಸೀದಿಗಳಲ್ಲಿ ನಮಾಜ್ ಮಾಡುತ್ತಿದ್ದರು ಎಂದು ಅವರು ಹೇಳಿದರು.

ಬಾಡಿಗೆ ಒಪ್ಪಂದ ಹಾಗೂ ತಾವು ಕೆಲಸ ಮಾಡುತ್ತಿದ್ರುವ ಬಗ್ಗೆ ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಸಲ್ಲಿಸುವುದು ಕಡ್ಡಾಯವಲ್ಲದ ಕಾರಣ ಅಕ್ರಮ ವಲಸಿಗರಿಗೆ ಸುಲಭವಾಗಿದೆ.

ಉಡುಪಿ ಹಾಗೂ ಮಂಗಳೂರಿನಲ್ಲಿ ಇಂತಹ ಅನೇಕ ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಾಂಗ್ಲಾದೇಶದ ಪ್ರಜೆಗಳಿಗೆ ಎರಡು ಕೊಠಡಿಗಳನ್ನು ಒಳಗೊಂಡಿರುವ ವಸತಿ ಸೌಕರ್ಯವನ್ನು ಆಸಿಫ್ ಎಂಬುವರು ಒದಗಿಸಿದ್ದಾರೆ. ಎಂಟು ಮಂದಿ ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಒಂದು ಕೋಣೆಯಲ್ಲಿ ಉಳಿದುಕೊಂಡಿದ್ದರು ಹಾಗೂ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಇನ್ನೊಂದು ಕೋಣೆಯಲ್ಲಿ ಸಂಗ್ರಹಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!