spot_img
Wednesday, March 18, 2026
spot_img

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ವತಿಯಿಂದ ದಸರಾ ಆಚರಣೆ

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ.) ಕುಂದಾಪುರ, ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಾಂಸ್ಕೃತಿಕ ಆಚರಣೆ, ಕಲೆ, ಸಂಸ್ಕಾರಕ್ಕೆ ಹೆಚ್ಚಿನ ಒತ್ತು ನೀಡುವ ಕುಂದಾಪುರದ ಸುಜ್ಞಾನ ಎಜುಕೇಶನ್ ಟ್ರಸ್ಟ್(ರಿ. )ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಆಕರ್ಷಣೆಯಾಗಿ ಚೌಡೇಶ್ವರಿ ಹುಲಿ ವೇಷ ಕುಣಿತ ತಂಡ ಕುಂದಾಪುರ ಇವರಿಂದ ಸಾಂಸ್ಕೃತಿಕ ಹುಲಿ ವೇಷ ಕುಣಿತ ಪ್ರದರ್ಶನ ನಡೆಯಿತು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಹುಲಿವೇಷದೊಂದಿಗೆ ಹೆಜ್ಜೆ ಹಾಕಿದರು.ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಭಾಗದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಆಚರಣೆಯ ಜ್ಞಾನವನ್ನು ಒದಗಿಸುವ ನಿಟ್ಟಿನಲ್ಲಿ ಬಹಳ ವೈಭವದಿಂದ ಹುಲಿ ವೇಷ ಕುಣಿತದ ಆಯೋಜನೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್.ಬಿ.ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಪ್ರದೀಪ್. ಕೆ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿಗಳು,ಪೋಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!