spot_img
Saturday, February 14, 2026
spot_img

ಕೊ* ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್‌ ಆದೇಶಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿದರು. ಇಂದು(ಸೋಮವಾರ) SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಪ್ರಕರಣದ ಪೈಕಿ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.

ಇನ್ನುಳಿದಂತೆ ನಟ ದರ್ಶನ್, ಪವಿತ್ರಾಗೌಡ, ಎ11 ನಾಗರಾಜು, ಎ12 ಲಕ್ಷ್ಮಣ್ ಜಾಮೀನು ಅರ್ಜಿ ವಜಾಗೊಂಡಿದೆ. ದರ್ಶನ್‌ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!