spot_img
Thursday, March 19, 2026
spot_img

ಬೈಂದೂರು ತಾಲೂಕು ಪಂಚಾಯತಿಯ ಪ್ರಥಮ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ ಅವಿರೋಧ ಆಯ್ಕೆ


ಬೈಂದೂರು, ಆ.11: ಬೈಂದೂರು ತಾಲೂಕು ಪಂಚಾಯತಿಯ ಪ್ರಥಮ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಲಿನಿ ಕೆ ಆಯ್ಕೆಯಾಗಿದ್ದಾರೆ. ಇಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಕುಂದಾಪುರ ತಾಲೂಕಿನಿಂದ ವಿಭಜನೆಗೊಂಡ ಬೈಂದೂರು ತಾಲೂಕು ಪಂಚಾಯತಿ ನೂತನವಾಗಿ ರಚನೆಗೊಂಡಿತ್ತು. ಬೈಂದೂರು ತಾಲೂಕು ಪಂಚಾಯತಿ 14 ಸದಸ್ಯ ಬಲವನ್ನು ಹೊಂದದೆ.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಮಹೇಂದ್ರ ಪೂಜಾರಿ 2ನೇ ಬಾರಿಗೆ ತಾಪಂ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಮೊದಲು ಕಿರಿಮಂಜೇಶ್ವರ ಕ್ಷೇತ್ರದಿಂದ, ನಂತರ ಕಂಬದಕೋಣೆ ಕ್ಷೇತ್ರದಿಂದ ಅವರು ಆಯ್ಕೆಗೊಂಡಿದ್ದರು. ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಮಾಲಿನಿ ಕೆ. ಬೈಂದೂರು ತಾಲೂಕು ಪಂಚಾಯತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಬಾಬು ಶೆಟ್ಟಿ, ಸುರೇಶ ಬಟ್ವಾಡಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಬೈಂದೂರು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜೆಡ್ಡು ಉಪಸ್ಥಿತರಿದ್ದರು.

ಕುಂದಾಪುರ ಸಹಾಯಕ ಆಯುಕ್ತರಾದ ರಾಜು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭಾರತಿ, ತಹಶೀಲ್ದಾರ್ ಬಿ.ಪಿ ಪೂಜಾರ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!