Sunday, November 3, 2024

ಗಂಗೊಳ್ಳಿ ದಸರಾಕ್ಕೆ ವೈಭವದ ತೆರೆ

ಗಂಗೊಳ್ಳಿ : ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ.

ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಈ ಬಾರಿಯ ಶ್ರೀ ಶಾರದಾ ಮಹೋತ್ಸವ ವಿಶೇಷ ಆಕರ್ಷಣೆ ಪಡೆದುಕೊಂಡಿತ್ತು. ವಿವಿಧ ಜಿಲ್ಲೆಗಳ ಕಲಾ ತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು, ಹುಲಿವೇಷ ತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗೆ ಸಾಗಿ ಬಂದು ಅಲ್ಲಿಂದ ನಾಯಕವಾಡಿ ಸರ್ಕಲ್‌ವರೆಗೆ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಶೋಭಾಯಾತ್ರೆಯಲ್ಲಿ ನವದುರ್ಗೆಯರನ್ನು ಕಾಣಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಕೇರಳದ ಆಕರ್ಷಕ ಚಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದವು.

ಶಾರದೆಯನ್ನು ಹೊತ್ತ ಅಲಂಕೃತ ವಾಹನ ಗಂಗೊಳ್ಳಿಯ ರಾಜಬೀದಿಯಲ್ಲಿ ಸಾಗಿ ಬಂದು ಗಂಗೊಳ್ಳಿಯ ಬಂದರಿನಲ್ಲಿ ಪಂಚಗಂಗಾವಳಿ ನದಿಯಲ್ಲಿ ಶಾರದಾ ವಿಗ್ರಹದ ಜಲಸ್ತಂಭನ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಗಂಗಾವಳಿ ನದಿಗೆ ಸಾಮೂಹಿಕ ಪಂಚಗಂಗಾ ಆರತಿ ಕಾರ್ಯಕ್ರಮ ನಡೆಯಿತು. ಆಕರ್ಷಕ ಸುಡುಮದ್ದು ಪ್ರದರ್ಶನ ಜನರ ಕಣ್ಮನ ಸೆಳೆಯಿತು.

ಕುಂದಾಪುರ ಡಿವೈ‌ಎಸ್‌ಪಿ ಬೆಳಿಯಪ್ಪ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹರೀಶ್ ಆರ್., ಬಸವರಾಜ್ ಕನಶೆಟ್ಟಿ ಹಾಗೂ ವಿವಿಧ ಠಾಣೆಯ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ., ಪ್ರ.ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ ಮೊದಲಾದವರ ನೇತೃತ್ವದಲ್ಲಿ ಶೋಭಾಯಾತ್ರೆಯು ಯಶಸ್ವಿಯಾಗಿ ಸಂಪನ್ನಗೊಂಡಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!