Sunday, November 3, 2024

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆ | ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗೂ ದಿನಾಂಕ ಘೋಷಣೆ

ಜನಪ್ರತಿನಿಧಿ (ನವದೆಹಲಿ) : ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶಾಸಕರಿಂದ ತೆರವುಗೊಂಡ ಕರ್ನಾಟಕದ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. ನ.13 ರಂದು ಮತದಾನ ನಡೆಯಲಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದಿನಾಂಕ ಘೋಷಿಸಿದ್ದಾರೆ.

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಶಿಗ್ಗಾಂವಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾವೇರಿಯಿಂದ, ಚನ್ನಪಟ್ಟಣ ಶಾಸಕರಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಪ್ರವೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂರು ವಿಧಾನಸಭಾ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಇನ್ನು, ಅ.15 ರಂದು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಿದೆ.

ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದರೆ, ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಪೂರ್ಣಗೊಂಡ ಹರ್ಯಾಣದ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ಉಪಚುನಾವಣೆಗಳು ಇಲ್ಲ ಎಂದು ಮುಖ್ಯ ಆಯುಕ್ತರು ಘೋಷಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!