spot_img
Sunday, February 15, 2026
spot_img

ರಾಜ್ಯ ಸರ್ಕಾರದಿಂದ ಬಿಗ್‌ ಆಫರ್‌ : ₹10,000ದಲ್ಲಿ ರಾಮೇಶ್ವರ, ಕನ್ಯಾಕುಮಾರಿ, ಮಧುರೈ ಸೇರಿ ಪುಣ್ಯ ಕ್ಷೇತ್ರಗಳ ಆರು ದಿನಗಳ ಟೂರ್‌ ಪ್ಯಾಕೇಜ್‌ !

ಜನಪ್ರತಿನಿಧಿ (ಬೆಂಗಳೂರು) : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು ₹25,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹10,000 ಭರಿಸಲಾಗುತ್ತದೆ. ಹಾಗೂ ಸಹಾಯಧನ ₹5,000 ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ.

ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. 3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ.

ಟಿಕೆಟ್‌ ಬುಕ್ಕಿಂಗ್‌ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic&sector=All&bdar=6 ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611,8595931293, 8595931291 ಗೆ ಕರೆ ಮಾಡಬಹುದು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!