Sunday, November 3, 2024

ಅ.20 ರಂದು ಉದ್ಯೋಗ ಮೇಳ

ಉಡುಪಿ:ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಶನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ,  ಇಲ್ಲಿ ಅಕ್ಟೋಬರ್ 20 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ.
ಈ ಪ್ರಯುಕ್ತ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ರಾಜ್ಯದ ಎಲ್ಲಾ ವಲಯಗಳಿಂದ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಾಧ್ಯಮ /ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದ್ದು ರಾಜ್ಯದ ಯುವಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉದ್ಯೋಗಾಕಾಂಕ್ಷಿ ಹಾಗೂ  ಉದ್ಯೋಗದಾತರು https://jobfair.calicut.nielit.in/ ಗೆ  ಭೇಟಿ ನೀಡಿ ತಮ್ಮ ಸ್ವ -ವಿವರಗಳನ್ನು ಉಚಿತವಾಗಿ ನೋಂದಣಿ ಮಾಡಿಕೊಂಡು, ಮೇಳದಲ್ಲಿ ಭಾಗವಹಿಸಿ,  ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆಯುವಂತೆ, ಜಿಲ್ಲಾ, ಕೌಶಲ್ಯಾಭಿವೃದ್ಧಿ ಅಧಿಕಾರಿಗಳ  ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!