Friday, October 18, 2024

ಕೋಟೇಶ್ವರ: ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ: ಇಂದು ಸಮಾಜದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತರಬೇತಿಗೊಂಡ ವಿದ್ಯಾರ್ಥಿಗಳು ಸಮಾಜದ ಮುಖ್ಯ ವಾಹಿನಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಿಕ, ಶೈಕ್ಷಣಿಕ ಹಾಗು ಆರ್ಥಿಕ ಅಭಿವೃದ್ಧಿಯಲ್ಲಿ ಗಮನಾರ್ಹವಾದ ಸೇವೆಯಲ್ಲಿ ಸಲ್ಲಿಸುತ್ತಿದ್ದಾರೆ. ಗಾಂಧಿಜೀಯವರ ಕನಸಾದ ರಾಮರಾಜ್ಯ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅತ್ಯಂತ ಮೂಂಚೂಣಿಯಲ್ಲಿದೆ. ಆದುದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯೊಂದಿಗೆ ವೈಯುಕ್ತಿಕ ಪ್ರಗತಿಗಾಗಿ ರಾಷ್ಟ್ರೀಯ ಸೇವಾ ಯೋಜನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅವಶ್ಯಕ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜನಾಧಿಕಾರಿ ರಮಾನಂದ ನಾಯಕ ತಿಳಿಸಿದರು.

ಅವರು, ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ, ಕೋಟೇಶ್ವರ, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ಮತ್ತು ೨ ವತಿಯಿಂದ ಸಂಘಟಿಸಲಾದ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ೨೦೨೪-೨೫ ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ದ್ಯೇಯೋದ್ದೇಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ವಿದ್ಯಾರ್ಥಿ ಜೀವನವು ಸಾಫಲ್ಯತೆಯೊಂದಿಗೆ ಮುಂದೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್. ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿ. ಸಿ ಎ. ವೈಷ್ಣವಿ ಮತ್ತು ತಂಡದವರ ಯೋಜನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ರ ಕಾರ್ಯಕ್ರಮಾಧಿಕಾರಿ ಸಂತೋಷ ನಾಯ್ಕ ಹೆಚ್. ಕಾರ್ಯಕ್ರಮವನ್ನು ಸಂಘಟಿಸಿ ಅತಿಥಿಗಳನ್ನು ಸ್ವಾಗತಿಸಿದರು. ರುಚಿತಾ, ದ್ವಿತೀಯ ಬಿ ಕಾಂ ವಂದಿಸಿದರು. ವಿದ್ಯಾ ದ್ವಿತೀಯ ಬಿ ಸಿ ಎ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!