spot_img
Wednesday, January 22, 2025
spot_img

ಕಾವೇರಿ ಐದನೇ ಹಂತದ ಯೋಜನೆಗೆ ಸಿಎಂ, ಡಿಸಿಎಂ ಚಾಲನೆ

ಜನಪ್ರತಿನಿಧಿ (ಬೆಂಗಳೂರು) : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಚಾಲನೆ ನೀಡಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್, ವಿಧಾನಸಭೆ, ವಿಧಾನಪರಿಷತ್ ಸದಸ್ಯರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!