spot_img
Sunday, February 15, 2026
spot_img

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ 2014ರಲ್ಲಿ ಶಂಕುಸ್ಥಾಪನೆಗೊಂಡು, ಇಂದು(ಬುಧವಾರ) ಅವರೇ  ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವ ಸಂದರ್ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಉಪಸ್ಥಿತರಿದ್ದರು.

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯ ಪಕ್ಷಿ ನೋಟ ಇಲ್ಲಿದೆ :
* ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ ಜಲ ಮೂಲ.

* ಕಾವೇರಿ ನದಿಯ ನೀರನ್ನು ಬೆಂಗಳೂರಿನ ಬೇಡಿಕೆಗೆ ಬಳಸಿ ಕೊಳ್ಳಲು ಕರ್ನಾಟಕ ಸರ್ಕಾರ ಅನುಮತಿ ನೀಡಿತು. 1974 ರಿಂದೀಚೆಗೆ ನೀರು ಪೂರೈಕೆಗಾಗಿ ಕಾವೇರಿ ಜಲಮೂಲವನ್ನು ಹಂತಹಂತವಾಗಿ ಬಳಸಿಕೊಳ್ಳವುದು ಪ್ರಾರಂಭವಾಯಿತು.

* ಕಾವೇರಿ ನೀರು ಸರಬರಾಜು ಯೋಜನೆಯ 4 ನೇ ಘಟ್ಟ 2 ನೇ ಹಂತವನ್ನು ಪೂರ್ಣಗೊಳಿಸಿದ ನಂತರವೂ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲ್ಪಟ್ಟ 110 ಹಳ್ಳಿಗಳಿಗೆ ನೀರು ಪೂರೈಸಲು ಮಂಡಳಿಗೆ ಕಷ್ಟವಾಗುತ್ತಿತ್ತು.

* ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಸಮರ್ಪಕ ನೀರು ಪೂರೈಕೆ ಮಾಡಲು 2,200 ಎಂ.ಎಲ್‌.ಡಿ ನೀರಿನ ಅವಶ್ಯಕತೆಯಿದೆ. ಆದರೆ, ಪ್ರಸ್ತುತ ಇರುವ ನಾಲ್ಕೂ ಹಂತಗಳ ಮೂಲಕ ನಮಗೆ ಲಭ್ಯವಾಗುತ್ತಿರುವುದು ಕೇವಲ 1450 ಎಂ.ಎಲ್‌.ಡಿಗಳಷ್ಟು ಮಾತ್ರ.

* ಇದನ್ನ ಅರಿತ ಕರ್ನಾಟಕ ಸರಕಾರ ನಗರಾಭಿವೃದ್ಧಿ ಇಲಾಖೆಯ ಆದೇಶದ ಅನ್ವಯ ಬೆಂಗಳೂರು ನಗರಕ್ಕೆ ಹೆಚ್ಚುವರಿಯಾಗಿ 10 ಟಿಎಂಸಿ (ಪ್ರತಿದಿನ 775 ಮಿಲಿಯನ್‌ ಲೀಟರ್‌) ನೀರನ್ನು ಮಂಜೂರು ಮಾಡಿತ್ತು.

* ನಗರದ ನೀರಿನ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾವೇರಿ 5ನೇ ಘಟ್ಟವನ್ನು 2 ಹಂತಗಳಲ್ಲಿ ಜಪಾನ್‌ ಇಂಟರ್‌ನ್ಯಾಷನಲ್ ಕೋ-ಆಪರೇಷನ್‌ ಏಜೆನ್ಸಿ – ಜೈಕಾ ಆರ್ಥಿಕ ನೆರವಿನಿಂದ 2014 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.

* ಈ ಮಹತ್ವಾಕಾಂಕ್ಷಿ, ಬೃಹತ್‌ ಹಾಗೂ ದೇಶದಲ್ಲೆ ಅತಿದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲು 4,333 ಕೋಟಿ ರೂಪಾಯಿಗಳ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಯಿತು. ಇದಕ್ಕೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ನಿಂದ ಹಣಕಾಸು ಬೆಂಬಲ ದೊರೆಯಿತು.

* ಜೈಕಾ ಶೇಕಡಾ 84ರಷ್ಟು ಹಣವನ್ನು ಒದಗಿಸಿದರೆ, ಉಳಿದ ಶೇಕಡಾ 16ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿಯ ವತಿಯಿಂದ ಭರಿಸಲು ನಿರ್ಧರಿಸಲಾಯಿತು. ಇದಕ್ಕೆ ಪೂರಕವಾಗಿ 2018 ರಲ್ಲಿ JICA ಜತೆ ಔಪಚಾರಿಕ ಸಾಲ ಒಪ್ಪಂದಕ್ಕೆ ಸಹಿ ಮಾಡಲಾಯಿತು.

* ದೇಶದ ಅತಿದೊಡ್ಡ ನೀರು ಸರಬರಾಜು ಯೋಜನೆಯ ಹಿಂದೆ ಒಂದು ಭಗೀರಥ ಪ್ರಯತ್ನವಿದೆ.

* ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್‌ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ.

* ಕಾವೇರಿ 5ನೇ ಹಂತದ ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.

* ⁠⁠⁠⁠ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನದಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್‌ಡಿ ನೀರು ದೊರೆಯಲಿದೆ. ಇದು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲಿದೆ.

* ⁠⁠ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದರಿಂದ ಜಲಮಂಡಳಿಯ ಆದಾಯ ಹೆಚ್ಚಲಿದೆ.

* ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!