spot_img
Wednesday, April 1, 2026
spot_img

ಅ.20ರಂದು ಮಂದಾರ್ತಿಯಲ್ಲಿ ಸಹಕಾರಿ ಕ್ರೀಡಾಕೂಟ

ಮಂದಾರ್ತಿ: ಮಂದಾರ್ತಿ ಸೇವಾ ಸಹಕಾರಿ ಸಂಘ ಇದರ ಶತಸಾರ್ಥಕ್ಯ ಶತಮಾನೋತ್ಸವದ ಪ್ರಯುಕ್ತ ಸಹಕಾರಿ ಕ್ರೀಡಾಕೂಟ-2024-25 ಅಕ್ಟೋಬರ್ 20 ಆದಿತ್ಯವಾರ ಬೆಳಿಗ್ಗೆ 930ಕ್ಕೆ ಮಂದಾರ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್.ಗಂಗಾಧರ ಶೆಟ್ಟಿ ವಹಿಸಲಿದ್ದಾರೆ.
ಕ್ರೀಡಾಜ್ಯೋತಿ ಪ್ರಜ್ವಲನೆಯನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಜಿ.ಪಂ. ಮಾಜಿ ಸದಸ್ಯರಾದ ಪ್ರತಾಪ ಹೆಗ್ಡೆ ಮಾರಾಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ರೋಶನ್ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯ, ಮಂದಾರ್ತಿ ದುರ್ಗಾ ಕ್ಲಿನಿಕ್‌ನ ವೈದ್ಯರಾದ ಡಾ.ನಾಗಾನಂದ್ ಭಟ್ ಭಾಗವಹಿಸಲಿದ್ದಾರೆ.

ಶ್ರೀ ದುರ್ಗಾಪರಮೇಶ್ವರಿ ದೇವಳದ ಪದವಿಪೂರ್ವ ಕಾಲೇಜು ಮಂದಾರ್ತಿ ಇಲ್ಲಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಶೆಟ್ಟಿ, ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ನಾರಾಯಣ ಮಣೂರು, ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!