Friday, October 18, 2024

ವಾಲ್ಮೀಕಿ ಜಯಂತಿ : ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ ಶುಭಾಶಯ

ಜನಪ್ರತಿನಿಧಿ (ಬೆಂಗಳೂರು) : ಪ್ರತಿಭೆ ಹುಟ್ಟಿನ ಉಡುಗೊರೆ ಅಲ್ಲ, ಸಾಧನೆಯ ಗಳಿಕೆ ಎನ್ನುವುದನ್ನು ರಾಮಾಯಣ ಮಹಾಕಾವ್ಯ ಬರೆದು ತೋರಿಸಿದ ದಲಿತ ಪ್ರತಿಭೆ, ಆದಿ ಕವಿ ವಾಲ್ಮೀಕಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಪ್ರೇರಣೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಟ್ಟುಕತೆಗಳಿಂದ ಹುಟ್ಟಿಕೊಂಡಿರುವ ಪೂರ್ವಗ್ರಹಗಳನ್ನು ಪಕ್ಕಕ್ಕಿಟ್ಟು ಈ ಸಾಧಕನ ನಿಜ ಜೀವನಗಾಥೆಯ ಅಧ್ಯಯನ ತಳಸಮುದಾಯಗಳ ಕೋಟ್ಯಂತರ ಪ್ರತಿಭೆಗಳಿಗೆ ಸ್ಪೂರ್ತಿ ಮತ್ತು ಆತ್ಮವಿಶ್ವಾಸವನ್ನು ಹುಟ್ಟಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಬಾಂಧವರಿಗೆಲ್ಲರಿಗೂ ಮಹಾ  ಕವಿ ವಾಲ್ಮೀಕಿ ಜನ್ಮದಿನದ ಶುಭಾಶಯ ಹೇಳಿದ್ದಾರೆ.

ಇನ್ನು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಶುಭಾಶಯ ಸಲ್ಲಿಸಿದ್ದು, ನಾಡಿನ ಸಮಸ್ತ ಜನತೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಭಾರತದ ಮೊಟ್ಟ ಮೊದಲ ಮಹಾಕಾವ್ಯ, ಪರಮ ಪವಿತ್ರವಾದ ರಾಮಾಯಣದ ಮೂಲಕ ಜಗತ್ತಿಗೆ ಜೀವನ ಮೌಲ್ಯಗಳನ್ನು ತಿಳಿಸಿದ ಕರ್ತೃ ಶ್ರೀ ಮಹರ್ಷಿ ವಾಲ್ಮೀಕಿ ಅವರನ್ನು ಸದಾಕಾಲ ಸ್ಮರಿಸೋಣ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!