spot_img
Wednesday, April 1, 2026
spot_img

ಇ.ಡಿ ತನಿಖೆಯಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ನಾಗೇಂದ್ರಗೆ ಒತ್ತಡ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಗೇಂದ್ರ ಅವರ ಮೇಲೆ ನನ್ನ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರು ಹೇಳುವಂತೆ ಒತ್ತಡ ಹೇರಲಾಗಿದೆ, ಕಿರುಕುಳವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬಹಿರಂಗವಾಗಿ ಆರೋಪಿಸಿದ್ದಾರೆ.

ಮಹರ್ಷಿ ವಾಲ್ಮೀಕ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದ ಬೆನ್ನಲ್ಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಂದ್ರ ಅವರು ನಿನ್ನೆ(ಬುಧವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಗ್ಗೆ ಪ್ರತಿಪಕ್ಷಗಳು ಟೀಕಿಸಿದ್ದವು. ಈ ನಡುವೆ ಸಿಎಂ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಈ ಬಗ್ಗೆ ಸ್ವತಃ ನಾಗೇಂದ್ರ ಅವರು ನಿನ್ನೆ ನನ್ನನ್ನು ಭೇಟಿ ಮಾಡಿ ಕೇಂದ್ರ ಸರ್ಕಾರವು ತನ್ನ ರಾಜಕೀಯ ಸ್ವಾರ್ಥ ಸಾಧನೆಗಾಗಿ ಇ.ಡಿ ತನಿಖಾ ಸಂಸ್ಥೆಯನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದನ್ನು ಹಾಗೂ ವಿಚಾರಣೆಯ ವೇಳೆ ತಾವು ಅನುಭವಿಸಿದ ಮಾನಸಿಕ ವೇದನೆಯನ್ನು ನನ್ನೊಂದಿಗೆ ಹಂಚಿಕೊಂಡಿರುವುದಾಗಿ ಸಿಎಂ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!