spot_img
Thursday, April 2, 2026
spot_img

ರಾಜ್ಯಮಟ್ಟದ ಗೀತಾ ವಾಚನ ಸ್ಪರ್ಧೆ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಪ್ರಥಮ

ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿ‌ಅಂಗಡಿ, ಕುಂದಾಪುರ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿನಿ ಕು. ರಿಷಿಕಾ ಆರ್. ದೇವಾಡಿಗ ಇವರು ಪರಂಪರಾ ಕಲ್ಚರಲ್ ಫೌಂಡೇಶನ್, ಬೆಂಗಳೂರು ಇವರು ನಡೆಸಿದ ರಾಜ್ಯಮಟ್ಟದ ದೇಶಭಕ್ತಿ ಗೀತಾ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ದೇಶ ಮತ್ತು ವಿದೇಶದ ಅನಿವಾಸಿ ಭಾರತೀಯ ವಿದ್ಯಾರ್ಥಿಗಳೂ ಸೇರಿದಂತೆ ಸುಮಾರು262 ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.
ಬಹುಮುಖ ಪ್ರತಿಭೆಯನ್ನು ಹೊಂದಿರುವ ರಿಷಿಕಾ ಇವಳು ಈಗಾಗಲೇ ಜಿಲ್ಲಾ ಮತ್ತು ರಾಜ್ಯಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ವಿಜೇತಳಾಗಿದ್ದು, ಇವಳ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಪ್ರಾಚಾರ್ಯರೂ ಆದ ಶರಣ ಕುಮಾರ ಅವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!