spot_img
Thursday, April 2, 2026
spot_img

ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : 2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಬೇಕು.ಜಾತ್ಯತೀತತೆ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧನದ ಮೌಲ್ಯಗಳ ಬಗ್ಗೆ ಸ್ಪಷ್ಟತೆ ಕೊಡುವ ಮೂಲಕ ಕಾರ್ಯಕರ್ತೆಯರನ್ನು ಸಜ್ಜುಗೊಳಿಸಿ, ಪಕ್ಷ ಸಂಘಟನೆ ಮಾಡುವ ಸಾಮರ್ಥ್ಯ ಸೌಮ್ಯರೆಡ್ಡಿಯವರಿಗೆ ಇದ್ದು, ಈ ದಿಕ್ಕಿನಲ್ಲಿ ಅವರು ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸೌಮ್ಯ ರೆಡ್ಡಿಯವರ ಪದಗ್ರಹಣ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಪಕ್ಷ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕೃತಿಯ ವಿರೋಧಿ. ಮುಖ್ಯವಾಗಿ ಬಿಜೆಪಿಯು ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು. ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲಾ ಜಾತಿ, ಎಲ್ಲಾ ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ ಎಂದು ಅವರು ಕಿಡಿ ಕಾರಿದ್ದಾರೆ.

ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು. ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ. ಬಿಜೆಪಿಯವರು ಅನ್ನಭಾಗ್ಯವನ್ನೂ ವಿರೋಧಿಸುತ್ತಾರೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನೂ ವಿರೋಧಿಸುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ಮಹಿಳೆಯರೇ ನೀಡಬೇಕು ಎಂದಿದ್ದಾರೆ.

ಸಂವಿಧಾನ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ನೀಡಿದೆ. ಈ ಸಂವಿಧಾನವನ್ನು ಬಿಜೆಪಿ ವಿರೋಧಿಸುತ್ತದೆ. ಬಿಜೆಪಿಯವರ ಗುರೂಜಿ ಸಾವರ್ಕರ್ ಸಂವಿಧಾನ ವಿರೋಧಿಸಿದ್ದರು. ಈ ಇತಿಹಾಸವನ್ನು ಮಹಿಳಾ ಕಾಂಗ್ರೆಸ್ ಘಟಕ ರಾಜ್ಯದ ಮಹಿಳೆಯರು, ಯುವತಿಯರಿಗೆ ಸರಿಯಾಗಿ ಮನದಟ್ಟು ಮಾಡಿಸಬೇಕು ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!