spot_img
Thursday, April 2, 2026
spot_img

ನಂದಿನಿ ಇಡ್ಲಿ ಮತ್ತು ದೋಸೆ ಸಿದ್ಧ ಹಿಟ್ಟು ಶೀಘ್ರ ಮಾರುಕಟ್ಟೆಗೆ !

ಜನಪ್ರತಿನಿಧಿ (ಬೆಂಗಳೂರ) : ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.

ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.

ಮೊದಲ ಹಂತದಲ್ಲಿ ಪ್ರತಿದಿನ ಹತ್ತು ಸಾವಿರದಿಂದ ಇಪ್ಪತ್ತಯ ಸಾವಿರ ಕೆಜಿ ಹಿಟ್ಟನ್ನು ಬೆಂಗಳೂರು ನಗರದಲ್ಲಿ ಮಾರಾಟ ಮಾಡಲಾಗುವುದು. ಇದಕ್ಕೆಂದೇ ಜಯನಗರದಲ್ಲಿ ಪ್ಯಾಕಿಂಗ್‌ ಘಟಕವೊಂದನ್ನು ತೆರೆಯಲಾಗಿದೆ. ಸಿದ್ಧ ಹಿಟ್ಟು ಮಾರಾಟಕ್ಕೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ ಎಂದು ಕೆಎಂಎಫ್‌ ಮೂಲಗಳು ಮಾಹಿತಿ ನೀಡಿದೆ.

ಈ ಹೊಸ ಪ್ರಾಡಕ್ಟ್‌ ನ್ನು ಉನ್ನತ ಮಟ್ಟದಲ್ಲಿ ಮಾರುಕಟ್ಟೆಗೆ ಪರಿಚಯಿಸುಬವ ದೃಷಿಯಲ್ಲಿ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ಯೋಜನೆ ರೂಪಿಸಿದ್ದು, ಕಾರ್ಯಕ್ರಮಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರ ಸಮಯ ಕೋರಲಾಗಿದೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!