spot_img
Thursday, April 2, 2026
spot_img

ಪರಿಷತ್ ಉಪ ಚುನಾವಣೆ ಪ್ರಭಾರಿಗಳ ಸಭೆ-ಶಾಸಕ ಕಿರಣ್ ಕೊಡ್ಗಿ ಭಾಗಿ

ಕುಂದಾಪುರ: ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಕುಂದಾಪುರ ಮಂಡಲ ಅಪೇಕ್ಷಿತ ಪ್ರಭಾರಿಗಳ ಸಭೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ಕುಂದಾಪುರ ಬಿಜೆಪಿಯ ಕಚೇರಿಯಲ್ಲಿ ನೆರವೇರಿತು.

ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಚುನಾವಣೆಯ ರೂಪರೇಷೆಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ಚುನಾವಣೆಯ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾದ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲ್ಲಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ರೇಷ್ಮಾ ಉದಯ್ ಕುಮಾರ್ ಶೆಟ್ಟಿ ಅವರು ಮಾತನಾಡಿ ಈ ಚುನಾವಣೆಯಲ್ಲಿ ಆಯಾಯ ಪುರಸಭೆ ಪಟ್ಟಣ ಪಂಚಾಯತ್ ಗ್ರಾಮ ಪಂಚಾಯಿತಿ ಭಾಗದಲ್ಲಿ ಈಗಾಗಲೇ ಚುನಾವಣೆ ಹಿನ್ನೆಲೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದ್ದು ಚುನಾವಣೆಯ ಕಾರ್ಯತಂತ್ರ ಮಾದರಿ ಪತ್ರಗಳ ಬಗ್ಗೆ ವಿಸ್ತಾರವಾಗಿ ಕಾರ್ಯಗಾರದ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಕುಂದಾಪುರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ. ಎಸ್, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!