Thursday, November 14, 2024

ಅ.20 ರಂದು ಕರಾವಳಿ ಪದ್ಮಶಾಲಿ/ಶೆಟ್ಟಿಗಾರರ ಮೂಲ ಕ್ಷೇತ್ರ ಬಾರ್ಕೂರಿನಲ್ಲಿ ಧರ್ಮದರ್ಶಿಗಳ ಚಿಂತನಾ ಸಭೆ

ಬಾರ್ಕೂರು: ಕರ್ನಾಟಕ ಕರಾವಳಿ ಪದ್ಮಶಾಲಿ/ಶೆಟ್ಟಿಗಾರರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10.30 ಕ್ಕೆ ಧರ್ಮದರ್ಶಿಗಳ ಚಿಂತನಾ ಸಭೆ ನಡೆಯಲಿದೆ.
ಈ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಕುರಿತು ಕರಾವಳಿ ಪದ್ಮಶಾಲಿ/ ಶೆಟ್ಟಿಗಾರ ಸಮಾಜದವರು ಆರಾಧಿಸಿ ಕೊಂಡು ಬಂದಿರುವ ಶ್ರೀ ವೀರಭದ್ರ ದೇವಸ್ಥಾನಗಳ ಧರ್ಮದರ್ಶಿಗಳು/ ಅಧ್ಯಕ್ಷರು/ ಗುರಿಕಾರರು ಭಾಗವಹಿಸುವ ಈ ಚಿಂತನಾ ಸಭೆಯನ್ನು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಾರ್ಕೂರು ರಂಗನಕೇರಿ ಶ್ರೀನಿವಾಸ್ ಶೆಟ್ಟಿಗಾರ್ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀ ಎನ್. ರಮೇಶ್ ಭಟ್ ಆಶೀರ್ವಚನ ನೀಡಲಿದ್ದಾರೆ.ಆಡಳಿತ ಮೊಕ್ತೇಸರರಾದ ಡಾ.ಜಯರಾಮ ಶೆಟ್ಟಿಗಾರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಚ್.ಎ. ಗೋಪಾಲ್ ಸಭೆಯಲ್ಲಿ ಉಪಸ್ಥಿತರಿರುವರು.
ಕರಾವಳಿ ಪದ್ಮಶಾಲಿ/ ಶೆಟ್ಟಿಗಾರ ಸಮಾಜದ 15 ದೇವಸ್ಥಾನಗಳಾದ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನ ಪಡುಬಿದ್ರಿ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಮಂಗಳೂರು,ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಸಾಲಿಕೇರಿ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಹಳೆಯಂಗಡಿ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಬಂಗ್ರ ಮಂಜೇಶ್ವರ, ಶ್ರೀ ವೀರಭದ್ರ ದೇವಸ್ಥಾನ ಕಿನ್ನಿಮುಲ್ಕಿ, ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನ ಕಾಪು, ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಸುರತ್ಕಲ್, ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನ ಕಲ್ಯಾಣಪುರ, ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನ ಕಾರ್ಕಳ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಮುಲ್ಕಿ, ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನ ಎರ್ಮಾಳು, ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಉಳ್ಳಾಲ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಹೊಸದುರ್ಗಾ, ಶ್ರೀ ವೀರಭದ್ರ ಸ್ವಾಮಿ ಮಹಮ್ಮಾಯಿ ದೇವಸ್ಥಾನ ಸಿದ್ದಕಟ್ಟೆ ಧರ್ಮದರ್ಶಿಗಳು/ ಅಧ್ಯಕ್ಷರು/ ಗುರಿಕಾರರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!