spot_img
Wednesday, April 1, 2026
spot_img

ಸಂಸದರು ರಾಜ್ಯ ಸರ್ಕಾರದ ಮೇಲೆ ದೂಷಣೆ ಮಾಡುವ ಮೊದಲು ಕೇಂದ್ರದ ಯೋಜನೆ ಜಾರಿಯ ಬಗ್ಗೆ ಕ್ರಮಕೈಗೊಳ್ಳಲಿ : ವಿಕಾಸ್‌ ಹೆಗ್ಡೆ

ಜನಪ್ರತಿನಿಧಿ (ಉಡುಪಿ/ಕುಂದಾಪುರ) : ಪಡಿತರ ಚೀಟಿ ವಿಚಾರದಲ್ಲಿ ಸಂಸದರ ಹೇಳಿಕೆ ರಾಜಕೀಯ ಪ್ರೇರಿತವಾದದ್ದು. ಸುದೀರ್ಘ ಅವಧಿಯಿಂದ ಜನಪ್ರತಿನಿದಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿಯವರು ಮಾಹಿತಿ ಕೊರತೆಯಿಂದಲೋ ಇಲ್ಲಾ ರಾಜಕೀಯ ಮಾಡುವ ಉದ್ದೇಶದಿಂದ ಜನರನ್ನು ದಾರಿ ತಪ್ಪಿಸುವ ಹೇಳಿಕೆ ನೀಡಬಾರದು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಚುನಾವಣೆಗೆ ಹೋಗುವ ಮೊದಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಹಾಗೂ ಜನಸಾಮಾನ್ಯರು ಇದರ ಪ್ರಯೋಜನ ಪಡೆದು ಸರ್ಕಾರದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡುವುದನ್ನು ಸಹಿಸಿಕೊಳ್ಳಲು ಸಾದ್ಯವಾಗದೆ ಸಂಸದರು ಜನರ ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಯಾರ ಬಿಪಿಎಲ್ ಪಡಿತರ ಚೀಟಿ ಕೂಡ ರದ್ದಾಗುವುದಿಲ್ಲ ಅರ್ಹತೆ ಇಲ್ಲದೇ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ಅದನ್ನೂ ಸಹ ಪರಿಶೀಲನೆ ಮಾಡುವ ಕಾರ್ಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಸದರು ರಾಜ್ಯ ಸರ್ಕಾರದ ಮೇಲೆ ದೂಷಣೆ ಮಾಡುವ ಮೊದಲು ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಕಸ್ತೂರಿ ರಂಗನ್ ವರದಿ, ಸಿ ಆರ್ ಝೆಡ್, ನಿರುದ್ಯೋಗ ಇತ್ಯಾದಿ ಸಮಸ್ಯೆಗಳನ್ನು ಪರಿಹಾರ ಮಾಡಲು ಶ್ರಮವಹಿಸಲಿ. ಸಂಸದರು ಗೃಹಲಕ್ಷ್ಮೀ ಯೋಜನೆ ಬಗ್ಗೆ ಯೋಚಿಸುವುದು ಬಿಟ್ಟು ಕೇಂದ್ರ ಸರ್ಕಾರದ ಯೋಜನೆ ಜಾರಿಯ ಬಗ್ಗೆ ಕ್ರಮಕೈಗೊಳ್ಳಲಿ ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!