spot_img
Wednesday, April 1, 2026
spot_img

ಉಪ ಚುನಾವಣೆ : ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ !

ಜನಪ್ರತಿನಿಧಿ (ಉಡುಪಿ) : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪಚುನಾವಣೆ 2024ಕ್ಕೆ ಸಂಬಂಧ ಪಟ್ಟಂತೆ ದಿನಾಂಕ 19/10/2024 ಸಂಜೆ 04:00 ಗಂಟೆಯಿಂದ ಇಂದ 21/10/ 20240 ಸಂಜೆ 04:00 ರವರೆಗೆ ಮಧ್ಯಪಾನ ನಿಷೇಧಿಸಿ ಪಾನ ನಿರೋಧ ದಿನವೆಂದು ಜಿಲ್ಲಾಡಳಿತ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪ-ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಚುನಾವಣೆಯನ್ನು ಘೋಷಿಸಿದ್ದು. ಉಡುಪಿ ಜಿಲ್ಲೆಯಲ್ಲಿ ದಿನಾಂಕ:21-10-2024 ರಂದು ಮತದಾನ ಹಾಗೂ ದಿನಾಂಕ:24-10-2024 ರಂದು ಮತ ಎಣಿಕೆ ನಿಗದಿಯಾಗಿರುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಚುನಾವಣಾ ಆಯೋಗದ ಉಲ್ಲೇಖಿತ ಪತ್ರದಲ್ಲಿನ ನಿರ್ದೇಶನದಂತೆ ಮತದಾನ ಪ್ರಾರಂಭವಾಗುವ ದಿನಾಂಕಕ್ಕೆ 48 ಗಂಟೆಗಳ ಮುಂಚಿತವಾಗಿ ಮದ್ಯ ಮಾರಾಟ/ಸಾಗಾಟವನ್ನು ನಿಷೇಧಿಸಿ ಪಾನ ನಿರೋಧ ದಿನವೆಂದು ಘೋಷಿಸಿ ಆದೇಶಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!