spot_img
Tuesday, March 31, 2026
spot_img

ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಜಿರಿಬಾಮ್ ನಲ್ಲಿ ಉಗ್ರರ ದಾಳಿ

ಜನಪ್ರತಿನಿಧಿ (ಮಣಿಪುರ) : ಸಂಘರ್ಷ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಇಂದು(ಶನಿವಾರ) ದಾಳಿ ನಡೆಸಿದ್ದರಿಂದ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು  ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳಲ್ಲಿ ವರದಿಯಾಗಿವೆ.

ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸುತ್ತಿವೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಿಂಸಾಚಾರ ಭುಗಿಲೇಳುತ್ತಿದ್ದಂತೆ ವೃದ್ಧರು, ಮಹಿಳೆಯರು ಮತ್ತು ಮಕ್ಕಳನ್ನು ಭದ್ರತಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜಿರಿಬಾಮ್ ಪಟ್ಟಣದಿಂದ ಸುಮಾರು 30 ಕಿಮೀ ದೂರದಲ್ಲಿರುವ ಬೊರೊಬೆಕ್ರಾ, ದಟ್ಟವಾದ ಕಾಡುಗಳು ಮತ್ತು ಪರ್ವತಮಯ ಭೂಪ್ರದೇಶದಿಂದ ಆವೃತವಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಳಿಕ ಈ ಪ್ರದೇಶವು ಇಂತಹ ಹಲವಾರು ದಾಳಿಗಳಿಗೆ ಸಾಕ್ಷಿಯಾಗುತ್ತಿದೆ. ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದ ಸಂಘರ್ಷ ಈಗ ಮತ್ತೆ ಭುಗಿಲೆದ್ದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!