spot_img
Wednesday, April 1, 2026
spot_img

ಮೂರೂ ಕ್ಷೇತ್ರಗಳ ಉಪ ಚುನಾವಣೆ : ಬಿಜೆಪಿ, ಜೆಡಿಎಸ್‌ ಪಕ್ಷಗಳ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ‌ ಹಾಕಿ ಚುನಾವಣೆ ನಿರ್ವಹಿಸಬೇಕು. ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಜಿದ್ದಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು ಎಂದು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂಬಂಧ ಸಚಿವರು ಹಾಗೂ ಪಕ್ಷದ ನಾಯಕರ ಜೊತೆ ನಡೆಸಿದ ಸುದೀರ್ಘ ಚರ್ಚೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ. ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು, ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಂಕರ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ ಎಂದು ತಿಳಿಸಿದರು.

ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!