spot_img
Wednesday, January 22, 2025
spot_img

ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೆ : ಸಿದ್ದರಾಮಯ್ಯ ವಿಶ್ವಾಸ

ಜನಪ್ರತಿನಿಧಿ (ಚಳ್ಳಕೆರೆ) : ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವು ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ₹1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿದ್ಧವಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಸನಗೌಡ ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ? ಇದು ಕಪ್ಪು ಹಣ ಇರಬಹುದಲ್ಲವೇ? ಭ್ರಷ್ಟಾಚಾರದ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ. ಇಂತಹ ಯತ್ನಾಳ್ ಅವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಉಳಿದಿಲ್ಲ ಎಂದು ಅವರು ಆಕ್ರೋಶ ಹೊರ ಹಾಕಿದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಒಂದೆರಡು ದಿನಗಳಿಂದ ನಿರೀಕ್ಷೆಗೂ ಮೀರಿ ಮಳೆ ಬಿದ್ದಿದ್ದು ಸ್ವಲ್ಪ ಪ್ರಮಾಣದಲ್ಲಿ ಸಂಚಾರ ಸಮಸ್ಯೆ ಕಂಡುಬರುತ್ತಿದೆ. ಇದನ್ನು ಸೂಕ್ತವಾಗಿ ನಿರ್ವಹಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!