spot_img
Thursday, March 5, 2026
spot_img

ಚನ್ನಪಟ್ಟಣ ಉಪ ಚುನಾವಣೆ : ಸಿಪಿ ಯೋಗೀಶ್ವರ್‌ MLC ಸ್ಥಾನಕ್ಕೆ ರಾಜೀನಾಮೆ ! | ಕಾಂಗ್ರೆಸ್‌ ಸೇರ್ಪಡೆ ? : ರಾಜಕೀಯ ಚರ್ಚೆ

ಜನಪ್ರತಿನಿಧಿ (ಬೆಂಗಳೂರು) : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವು ಜೋರಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಇಂದು (ಸೋಮವಾರ) ತಮ್ಮ MLC ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹೊರಟ್ಟಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, MLC ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾವುದೇ ಪಕ್ಷ ಸೇರ್ಪಡೆಗೊಳ್ಳುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಮಾತ್ರವಲ್ಲದೇ, ಈ ನಡುವೆ ಸಿಪಿ ಯೋಗೇಶ್ವರ್‌, ಕಾಂಗ್ರೆಸ್‌ ಈವರೆಗೆ ಸಂಪರ್ಕ ಮಾಡಿಲ್ಲ. ನಾಳೆ ಏನೋ ಗೊತ್ತಿಲ್ಲ ಎಂದು ಹೇಳುವುದರ ಮೂಲಕ ಮತ್ತೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸುತ್ತ ಆಗುತ್ತಿರುವ ರಾಜಕೀಯ ಚರ್ಚೆಯ ಮೇಲೆ ಕುತೂಹಲ ಹೆಚ್ಚಿಸಿದ್ದಾರೆ.

ಸದ್ಯ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಆದರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಹೀಗಾಗಿ ಸಿಪಿವೈ ಕಾಂಗ್ರೆಸ್‌ನತ್ತ ಒಲವು ತೋರಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಹೆಚ್ಚಿದೆ ಎನ್ನಲಾಗುತ್ತಿದೆ.

ಸದ್ಯ, ಚನ್ನಪಟ್ಟಣ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!