spot_img
Wednesday, April 1, 2026
spot_img

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಅ. 28ಕ್ಕೆ ಮುಂದೂಡಿದ ಹೈಕೋರ್ಟ್‌ !

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಇಂದು(ಮಂಗಳವಾರ) ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿರುವ ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿ ಕೇಳಿದ ನ್ಯಾಯಾಲಯ, ಆಕ್ಷೇಪ ಸಲ್ಲಿಕೆಗೆ ಎಸ್. ಪಿ. ಪಿ. ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!