spot_img
Wednesday, January 22, 2025
spot_img

ಡಿಕೆಶಿ ಮನೆಯಲ್ಲಿ ಸಿ.ಪಿ.ವೈ ದಿಢೀರ್‌ ಪ್ರತ್ಯಕ್ಷ : ರತ್ನಗಂಬಳಿ ಹಾಕಿ ಬರಮಾಡಿಕೊಳ್ಳಲು ಕಾಂಗ್ರೆಸ್‌ ಅಂತಿಮ ಹಂತದ ಸಿದ್ಧತೆ

ಜನಪ್ರತಿನಿಧಿ (ಬೆಂಗಳೂರು) :  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್‌ ಕೂಡು ಸಿಪಿವೈ ಅವರನ್ನು ರತ್ನಗಂಬಳಿ ಹಾಕಿ ಬರಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ.

ಯೋಗೀಶ್ವರ್‌ ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಅವರಿಬ್ಬರು ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಿಪಿವೈ, ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅ.24ರಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂಬ ಹಟಕ್ಕೆ ಬಿದ್ದಿರುವ ಯೋಗೇಶ್ವರ್, ಪರಿಷತ್ ನ ಬಿಜೆಪಿ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!