spot_img
Saturday, April 26, 2025
spot_img

ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಮಹಿಳಾ ಸಿಬ್ಬಂದಿಗಳ ಸುರಕ್ಷತೆಗೆ ಪಿಂಕ್‌ ದೂರು ಪೆಟ್ಟಿಗೆ ಸ್ಥಾಪನೆ : ಡಾ. ಶರಣಪ್ರಕಾಶ್‌ ಪಾಟೀಲ್‌

ಜನಪ್ರತಿನಿಧಿ (ಬೆಂಗಳೂರು) : ವೈದ್ಯಕೀಯ ವಿದ್ಯಾರ್ಥಿನಿಯರು, ಮಹಿಳಾ ಸಿಬ್ಬಂದಿ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ, ಕಿರುಕುಳ, ಲಿಂಗ ಆಧಾರಿತ ತಾರತಮ್ಯ ಪ್ರಕರಣಗಳಲ್ಲಿ ದೂರು, ಮಾಹಿತಿ ನೀಡಲು ಹಿಂದೇಟು ಹಾಕುವ ಮಹಿಳೆಯರು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಪತ್ರದ ಮೂಲಕ ತಿಳಿಸಲು ಪ್ರತಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್‌ ದೂರು ಪೆಟ್ಟಿಗೆಗಳನ್ನು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಹಿಳಾ ಸುರಕ್ಷತೆಯ ಕೇಂದ್ರ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಪ್ರತಿ ತಿಂಗಳು ಸಭೆ ಸೇರಿ ಮಹಿಳಾ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲಿನ ದೌರ್ಜನ್ಯ ಪ್ರಕರಣಗಳು, ಕೈಗೊಂಡ ಕ್ರಮಗಳು, ದೌರ್ಜನ್ಯ ತಡೆಗೆ ಅನುಸರಿಸಿದ ಮಾರ್ಗ, ನಿಯಮಗಳ ಪಾಲನೆ ಕುರಿತು ಪರಾಮರ್ಶೆ ನಡೆಸಲಿದೆ. ಪ್ರತಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಅಗತ್ಯ ಸಲಹೆ, ಸಹಕಾರ ನೀಡಲಿದೆ ಎಂದವರು ತಿಳಿಸಿದ್ದಾರೆ.

ಇನ್ನು, ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿನ ಪ್ರಮುಖವಾದ ಸ್ಥಳಗಳು, ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ನಿಯಂತ್ರಣ ಕೊಠಡಿಯಲ್ಲಿ ಕುಳಿತು ಪ್ರತಿಕ್ಷಣದ ದೃಶ್ಯಾವಳಿಯನ್ನು ವೀಕ್ಷಿಸಲಾಗುತ್ತದೆ. ಅನುಮಾನಾಸ್ಪದ ಚಲನವಲನ, ಘಟನೆಗಳು ಕಂಡುಬಂದರೆ ತಕ್ಷಣ ತುರ್ತು ಸಂದೇಶ ರವಾನಿಸಲಾಗುತ್ತದೆ. ಪ್ರತಿ ಆಸ್ಪತ್ರೆಯಲ್ಲೂ ರಚಿಸಲಾಗುವ ಭದ್ರತಾ ಸಮಿತಿಯು ಸ್ಥಳೀಯ ಪೊಲೀಸರನ್ನು ಒಳಗೊಂಡಿರುತ್ತದೆ. ಮಹಿಳಾ ದೌರ್ಜನ್ಯದ ಪ್ರಕರಣಗಳ ಸುಳಿವು ಸಿಕ್ಕ ತಕ್ಷಣ ರಕ್ಷಣಾ ತಂಡ ನೆರವಿಗೆ ಧಾವಿಸುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಿಳಾ ವೈದ್ಯಕೀಯ ಸಿಬ್ಬಂದಿಗಳ ವಸತಿ ಗೃಹಗಳು ಅಥವಾ ಹಾಸ್ಟೆಲ್‌, ಆಸ್ಪತ್ರೆ ಅಥವಾ ಕಾಲೇಜಿನ ಕ್ಯಾಂಪಸ್‌ ಒಳಗೆ ಇದ್ದರೂ ಕೆಲವೊಮ್ಮೆ ವಿಶಾಲವಾದ ಕ್ಯಾಂಪಸ್‌ಗಳ ಒಳಗೆ ನಡೆದು ಹೋಗುವಾಗ ಅಪಾಯಗಳು ಎದುರಾಗುವ ಸಂಭವ ಇರುತ್ತದೆ. ಅದಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಸ್ಪತ್ರೆ, ಹಾಸ್ಟೆಲ್‌ ನಡುವೆ ದಾರಿಯುದ್ದಕ್ಕೂ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲು ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!