Sunday, November 3, 2024

ಅ. 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಜನಪ್ರತಿನಿಧಿ (ಉಡುಪಿ) : ಅ. 24ರಿಂದ 26ರ ವರೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ ನಡೆಯಲಿದೆ. 24ರಂದು ಬೆಳಿಗ್ಗೆ 10 ಗಂಟೆಗೆ ಯೋಗ ಗುರು ಬಾಬಾ ರಾಮ್‌ದೇವ್  ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 24ರಂದು ಬೆಳಿಗ್ಗೆ 9ಕ್ಕೆ ಶೋಭಾಯಾತ್ರೆ ನಡೆಯಲಿದೆ. ಮೂರೂ ದಿನ ಬೆಳಿಗ್ಗೆ 6ರಿಂದ 7 ಗಂಟೆಯವರೆಗೆ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಅವರ ನೇತೃತ್ವದಲ್ಲಿ ಯೋಗ ತರಗತಿಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರತೀರ್ಥ ಸ್ವಾಮೀಜಿ, ಭಂಡಾರಕೇರಿ ಮಠದ ವಿದ್ವೇಶತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅನುಗ್ರಹ ಭಾಷಣ ಮಾಡಲಿದ್ದಾರೆ ಎಂದರು.

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಭಾರತೀಯ ವಿದ್ವತ್ ಪರಿಷತ್‌ನ ಅಧ್ಯಕ್ಷ ಪ್ರೊ. ವೀರನಾರಾಯಣ ಪಾಂಡುರಂಗಿ ಸೇರಿದಂತೆ ಹಲವು ಅಭ್ಯಾಗತರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!