spot_img
Wednesday, April 1, 2026
spot_img

ವಾಟ್ಸ್ಯಾಪ್‌ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಯೋಗೇಶ್ವರ್‌ ರಾಜೀನಾಮೆ | ಅಧಿಕೃತವಾಗಿ ಸಿ.ಪಿ.ವೈ ಕಾಂಗ್ರೆಸ್‌ ಗೆ ಸೇರ್ಪಡೆ

ಜನಪ್ರತಿನಿಧಿ (ಬೆಂಗಳೂರು) :  ಸಿ. ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ಬಳಿಕ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ವಾಟ್ಸ್ಯಾಪ್‌ ಜಾಲತಾಣದ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಭಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.

ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು, ನಾಳೆ (ಗುರುವಾರ) ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನು ಸಹ ಮಾಡಿಕೊಂಡಿದ್ದಾರೆ. ನಮ್ಮ ರಾಮನಗರ ಜಿಲ್ಲೆಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಯೋಗೇಶ್ವರ್ ಅವರು ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ, ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ. ಯೋಗೇಶ್ವರ್ ರಾಜಕಾರಣ ಆರಂಭಿಸಿದ್ದೆ ಕಾಂಗ್ರೆಸ್ ನಿಂದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಇನ್ನೂ ಕಾಂಗ್ರೆಸ್ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಸಚಿವ ಯೋಗೇಶ್ವರ್, ಕಳೆದ ಎರಡು ಮೂರು ತಿಂಗಳಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ಅಸಮಾಧಾನ ಮೂಡಿಸಿದವು, ಮೈತ್ರಿ ಆದ ಬಳಿಕ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣ ಇರಲಿಲ್ಲ, ಕೆಲವೊಮ್ಮೆ ನಮಗೆ ಅಂತ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ, ನಾನು ಯಾವುದೇ ಒತ್ತಡ ಹಾಗೂ ಷರತ್ತು ಇಲ್ಲದೆ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ, ಈ ಹಿಂದೆ ನಾನು ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜಕೀಯ ಆರಂಭಿಸಿದ್ದೆ. ಈಗ ಮತ್ತೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇಡಿದ್ದೇನೆ. ಇನ್ನು ಮುಂದೆ ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲರ ಒಟ್ಟುಗೂಡಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!