spot_img
Sunday, May 17, 2026
spot_img

ಶಟಲ್ ಬ್ಯಾಡ್ಮಿಂಟನ್: ಪ್ರಾರ್ಥನಾ ಪೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ : ಜಿಲ್ಲಾಡಳಿತ, ರಾಮನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ರಾಮನಗರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕನಕಪುರ ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರದ ಟೌನ್ ಟೆನ್ನಿಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನಲ್ಲಿ ಅ.7ರಂದು ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು.

ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಇವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!