spot_img
Wednesday, April 1, 2026
spot_img

ವಯನಾಡಿನಲ್ಲಿ ಪ್ರಿಯಾಂಕಾ ಭರ್ಜರಿ ರೋಡ್‌ ಶೋ | ನಾಮಪತ್ರ ಸಲ್ಲಿಕೆ | ಮಿಂಚಿದ ಸಿದ್ದರಾಮಯ್ಯ

ಜನಪ್ರತಿನಿಧಿ (ಕೇರಳ ) : ರಾಹುಲ್‌ ಗಾಂಧಿ ರಾಜೀನಾಮೆಯ ಕಾರಣದಿಂದ ತೆರವುಗೊಂಡ ವಯನಾಡ್‌ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರು ಇಂದು(ಬುಧವಾರ) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್‌ ಕೊಟ್ಟರು. ಕಲ್ಪೇಟಾದಲ್ಲಿ ನಡೆದ ರೋಡ್‌ ಶೋನಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು.


(ವಯನಾಡಿನ ಮಾಜಿ ಸಂಸದ, ಸಹೋದರ ರಾಹುಲ್‌ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್‌ ಶೋ)

ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಹೇಳಿದರು.

ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ. ವಯನಾಡಿನಲ್ಲಿ ರಾಹುಲ್ ಗಾಂಧಿಯವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕಾ ಗಾಂಧಿ ಅತ್ಯಂತ ಸಮರ್ಥರಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.


(ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ)


(ಸೋನಿಯಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ)

ವಯನಾಡ್ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನ. 23ರಂದು ಮತ ಎಣಿಕೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!