spot_img
Wednesday, April 1, 2026
spot_img

ಸಿಪಿವೈಗೆ ಎನ್‌ಡಿಎ ಅಲ್ಲಿ ಹಿರಿತನವಿತ್ತು | ಕಾಂಗ್ರೆಸ್‌ ಸೇರಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ : ಅಶೋಕ್‌

ಜನಪ್ರತಿನಿಧಿ (ಬೆಂಗಳೂರು) : ಸಿ. ಪಿ ಯೋಗೇಶ್ವರ್‌ ಕಾಂಗ್ರೆಸ್‌ ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೇ ಅವರಿಗೆ ಲೀಡ್‌ ಸಿಗುವುದಿಲ್ಲ. ಅವರು ಕಾಂಗ್ರೆಸ್‌ ಸೇರಿ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅಶೋಕ್‌ ಹೇಳಿದರು.

ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ವೈ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೇಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೇವು. ಅವರಿಗೆ ಟಿಕೇಟ್‌ ಸಿಗಲು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.

ನಮ್ಮಲ್ಲಿ ಬಿಜೆಪಿ ಜೆಡಿಎಸ್‌ ಗೆಲ್ಲಬೇಕು ಎಂಬುವುದಕ್ಕಿಂತ ಎನ್‌ಡಿಎ ಮೈತ್ರಿ ಗೆಲ್ಲಬೇಕು ಎಂಬ ಉದ್ದೇಶ ನಮ್ಮಲ್ಲಿದೆ. ಈಗ ಬಿಜೆಪ ಹಾಗೂ ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ ಗೆ ಅವಕಾಶ ಮಾಡಿಕೊಡಲಾಗಿತ್ತು. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಅಂಬರೀಷ್‌ ಅವರು ಗೆದ್ದಿದ್ದರು. ಈ ಬಾರಿ ಮಂಡ್ಯದಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಸ್ಪರ್ಧಿಸಿ ಗೆದ್ದು ಕೇಂದ್ರದ ಮಂತ್ರಿಯಾಗಿದ್ದಾರೆ ಎಂದು ಅವರು ಹೇಳಿದರು.

ಮೈತ್ರಿ ಒಗ್ಗಟ್ಟನ್ನು ಮರೆತು ಅವರು ಕಾಂಗ್ರೆಸ್‌ ಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆಗೊಂಡಿರುವುದರಿಂದ ಅವರ ರಾಜಕೀಯ ಭವಿಷ್ಯವೇ ಹಾಳಾಗಿದೆ. ಎನ್‌ಡಿಎ ಅಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಡಿ.ಕೆ ಶಿವಕುಮಾರ್‌ ಅವರು ಯೋಗೇಶ್ವರ್‌ ಅವರನ್ನು ಕಾಂಗ್ರೆಸ್‌ ಗೆ ಸೇರಿಸಿಕೊಂಡು ಅವರ ರಾಜಕೀಯ ಭವಿಷ್ಯ ಹಾಳು ಮಾಡಿದ್ದಾರೆ. ಇನ್ನು ಅವರನ್ನು ಹೇಗೆ ತುಳಿಯಬೇಕೆಂದು ಡಿಕೆಶಿ ಅವರೇ ಯೋಜನೆ ರೂಪಿಸುತ್ತಾರೆ ಎಂದು ಅಶೋಕ್‌ ವ್ಯಂಗ್ಯವಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!