spot_img
Wednesday, April 1, 2026
spot_img

ಜನವರಿಯಲ್ಲಿ ಕೌಶಲ ಶೃಂಗಸಭೆ ಆಯೋಜನೆಗೆ ನಿರ್ಧಾರ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ ನಡೆಯುವ ಈ ಶೃಂಗಸಭೆಗೆ ಕಾರ್ಪೋರೇಟ್‌ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3-4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ದಪಡಿಸಲಾಗುವುದು ಮತ್ತು ಬಜೆಟ್‌ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ʼನಿಪುಣ ಕರ್ನಾಟಕʼಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!