spot_img
Wednesday, January 22, 2025
spot_img

ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಜನಪ್ರತಿನಿಧಿ (ಬೆಂಗಳೂರು) : ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದ ಅಡಿ ಸಿಲುಕಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‌ಆರ್‌ಎಫ್) ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಕಟ್ಟಡ ಕುಸಿತ ದುರಂತದಲ್ಲಿ ಹಲವು ಜೀವಹಾನಿಯಾಗಿರುವುದನ್ನು ಕೇಳಿ ಬಹಳ ನೋವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ ₹2 ಲಕ್ಷ, ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯವು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಬೆಂಗಳೂರಿನ ಹೆಣ್ಣೂರು ಬಳಿಯ ಬಾಬು ಸಾ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. 13 ಜನರನ್ನು ರಕ್ಷಿಸಲಾಗಿದೆ.

An ex-gratia of Rs. 2 lakhs from PMNRF would be provided to the next of kin of each deceased.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!