spot_img
Wednesday, April 1, 2026
spot_img

ವಿಧಾನ ಪರಿಷತ್‌ ಉಪಚುನಾವಣೆ : ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಸುಲಭ ಜಯ

ಜನಪ್ರತಿನಿಧಿ(ಮಂಗಳೂರು) : ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಸ್ಥಾನಕ್ಕೆ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು(ಗುರುವಾರ) ನಡೆದಿದ್ದು, ನಿರೀಕ್ಷೆಯಂತೆ ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ, ಸಮೀಪದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರೆದುರಿಗೆ ಜಯ ಸಾಧಿಸಿದ್ದಾರೆ.

ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಇಂದು (ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಒಟ್ಟು 5907ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ, ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದರೆ, ಎಸ್ ಡಿಪಿಐ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದಿದ್ದಾರೆ. ಇನ್ನು, 90 ಮತಗಳು ಅಮಾನ್ಯಗೊಂಡಿವೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!