Sunday, November 3, 2024

ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣೆ ಮಾಡಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವುದು ತುಸು ಸಮಾಧಾನಕರ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ. ಸಾವನ್ನಪ್ಪಿರುವ 8 ಜನರಿಗೆ ತಲಾ ₹2 ಲಕ್ಷ ಕಾರ್ಮಿಕ ಇಲಾಖೆಯಿಂದ, ₹3 ಲಕ್ಷ ಬಿಬಿಎಂಪಿಯಿಂದ ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪರಿಹಾರ ನೀಡುವುದು ಸಾವಿನ ನಷ್ಟಕ್ಕೆ ಸಮನಾಗದು, ಆದರೆ ಸತ್ತವರು ಕೂಲಿ ಕಾರ್ಮಿಕರಾಗಿರುವುದರಿಂದ ಅವರ ಕುಟುಂಬದ ಬಗ್ಗೆ ನಾವೂ ಗಮನ ಹರಿಸಬೇಕಾಗುತ್ತದೆ. ಮೃತರ ಶವಗಳನ್ನು ಅವರ ಊರಿಗೆ ತಲುಪಿಸುವ ಕಡೆಯೂ ಪ್ರಯತ್ನ ನಡೆಯುತ್ತಿದೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!