spot_img
Wednesday, April 1, 2026
spot_img

ಅ.28 ರಂದು ಕುಂದಾಪುರ ತಾಲೂಕು ಪ್ರೌಢಶಾಲಾ ಮಕ್ಕಳ ಮತು ಚಿತ್ರಕಲಾ ಶಿಕ್ಷಕರ “ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಾಗಾರ”

ಕುಂದಾಪುರ, ಅ.24: ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ( ರಿ.) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ( ಬೋರ್ಡ್ ಹೈಸ್ಕೂಲ್ ) ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರತಾಲೂಕು ಪ್ರೌಢಶಾಲಾ ಮಕ್ಕಳ ಮತು ಚಿತ್ರಕಲಾ ಶಿಕ್ಷಕರ “ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಾಗಾರ” ಹಾಗೂ ಡ್ರಾಯಿಂಗ್ ಗ್ರೇಡ್ ಪರೀಕ್ಷಾ ವಿಷಯಗಳ ಬಗ್ಗೆ ಜಿಲ್ಲೆಯ ಚಿತ್ರಕಲಾ ಶಿಕ್ಷಕರಿಂದ ನಿರಂತರ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಅ.28 ಸೋಮವಾರದಂದು ಬೆಳಗ್ಗೆ ಗಂಟೆ ೧೦ ರಿಂದ ಸಂಜೆ ಗಂಟೆ ೪.೩೦ರ ವರೆಗೆ ಕುಂದಾಪುರದ ಸರಕಾರಿ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ಜರಗಲಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶೋಭಾ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಕೆ.ಗಣಪತಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಡಯಟ್ ಉಡುಪಿ ಜಿಲ್ಲೆಯ ಡ್ರಾಯಿಂಗ್ ಗ್ರೇಡ್ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಯೋಗಾನರಸಿಂಹಸ್ವಾಮಿ, ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಶೋಕ್ ನಾಯಕ್, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜುಬೋರ್ಡ್ ಹೈಸ್ಕೂಲ್ ಇಲ್ಲಿನ ಉಪ ಪ್ರಾಂಶುಪಾಲ ಕೆ.ಕಿರಣ್‌ಕುಮಾರ್ ಹೆಗ್ಡೆ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.)ಕುಂದಾಪುರ ಇದರ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಉಡುಪಿ ಜಿಲ್ಲಾಚಿತ್ರಕಲಾ ಶಿಕ್ಷಕರ ಸಂಘ (ರಿ.)ಉಡುಪಿ ಇದರ ಅಧ್ಯಕ್ಷ ಮೋಹನ್ ಕಡಬ, ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ ಕುಂದಾಪುರ ಇದರ ಅಧ್ಯಕ್ಷ ಪ್ರಶಾಂತ್ ಬಿ.ಪಿ. ಮತ್ತಿತರರು ಭಾಗವಹಿಸಲಿದ್ದಾರೆ.  ಈ ಚಿತ್ರಕಲಾ ಪ್ರದರ್ಶನದಲ್ಲಿ ಮಕ್ಕಳಿಗೆ, ಶಿಕ್ಷಕರಿಗೆ, ಪೋಷಕರಿಗೆ, ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!