spot_img
Wednesday, April 1, 2026
spot_img

ಹಂಗಳೂರು: ಹಾಡಹಗಲೇ ಮನೆಯ ಬಾಗಿಲು ಒಡೆದು ಕಳ್ಳತನ

ಕುಂದಾಪುರ, ಅ.24: ಹಂಗಳೂರು ಸಮೀಪದ ಬ್ರಹ್ಮಗುಡಿ ರಸ್ತೆಯಲ್ಲಿ ಹಾಡಹಗಲೇ ಜನವಸತಿ ಪ್ರದೇಶದ ಜಗದೀಶ್ ಚಂದ್ರ ನಾಯರ್ ಎಂಬುವರ ಮನೆಯ ಬಾಗಿಲು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಸಹಿತ ನಗ ನಗದು ದೋಚಿ ಪರಾರಿಯಾದ ಘಟನೆ ಅ.24 ಗುರುವಾರ ಮಧ್ಯಾಹ್ನ ನಡೆದಿದೆ.

ಮೂಲತಃ ಕೇರಳದವರಾದ ಜಗದೀಶ್ ಚಂದ್ರ ನಾಯರ್ ಅವರು ಪತ್ನಿ ಹಾಗೂ ಮಗಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ. ಪತಿ ಪತ್ನಿ ಇಬ್ಬರೂ ಕುಂದಾಪುರದಲ್ಲಿ ಪ್ರಿಂಟಿಂಗ್ ಪ್ರೆಸ್ ಕೆಲಸ ಮಾಡಿಕೊಂಡಿದ್ದಾರೆ. ಅವರ ಮಗಳು ಶಾಲೆಗೆ ಹೋಗುತ್ತಿದ್ದಾಳೆ. ಗುರುವಾರ ಮಧ್ಯಾಹ್ನ ೨ ಗಂಟೆಗೆ ಜಗದೀಶ್ ಚಂದ್ರ ಹಾಗೂ ಪತ್ನಿ ಮನೆಯಲ್ಲಿ ಊಟ ಮಾಡಿ ಪ್ರೆಸ್ ಗೆ ಹೋಗಿದ್ದರು. ಸಂಜೆ ೪ ಗಂಟೆಗೆ ಜಗದೀಶ್ ಅವರ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಅನುಮಾನ ಬಂದು ಹಿಂದುಗಡೆ ಹೋಗಿ ನೋಡಿದಾಗ ಮನೆಯ ಹಿಂಬದಿಯ ಬಾಗಿಲು ಒಡೆದು ದರೋಡೆ ನಡೆಸಿರುವುದು ತಿಳಿದು ಬಂದಿದೆ.

ಎಷ್ಟು ಮೌಲ್ಯದ ಕಳ್ಳತನವಾಗಿದೆ ಇನ್ನಷ್ಟೇ ತಿಳಿಯಬೇಕಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!