spot_img
Wednesday, April 1, 2026
spot_img

ನಿವೇಶನ ಹಂಚಿಕೆ ಪ್ರಕರಣ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆರು ಸಿಬ್ಬಂದಿಗಳಿಗೆ ಇ.ಡಿ ಸಮನ್ಸ್‌ !

ಜನಪ್ರತಿನಿಧಿ (ಮೈಸೂರು) : ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆರು ಸಿಬ್ಬಂದಿಗಳಿಗೆ ಜಾರಿ ನಿರ್ದೇಶನಾಯಯ (ಇ.ಡಿ) ಇಂದು (ಶುಕ್ರವಾರ) ಸಮನ್ಸ್‌ ಜಾರಿ ಮಾಡಿದೆ.

ಸಮನ್ಸ್‌ ನಲ್ಲಿ ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಗೆ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ಮೈಸೂರ ತಾಲೂಕಿನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಯಲ ಶೋಧ ಕಾರ್ಯಾಚರಣೆ ನಡೆಸಿತ್ತು.

ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ. ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!