spot_img
Wednesday, January 22, 2025
spot_img

ನ್ಯಾ. ಸಂಜೀವ್ ಖನ್ನಾ ಮುಂದಿನ CJI ಆಗಿ ನೇಮಕ | ನವೆಂಬರ್ 11ಕ್ಕೆ ಅಧಿಕಾರ ಸ್ವೀಕಾರ.

ಜನಪ್ರತಿನಿಧಿ (ನವದೆಹಲಿ) : ನ್ಯಾ. ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಸಿಜೆಐ ಡಿ ವೈ ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ.

ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವು ದಿನಗಳ ನಂತರ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಶಿಫಾರಸ್ಸು ಮಾಡಿದ್ದಾರೆ.

ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.

CJI ಚಂದ್ರಚೂಡ್ ಅವರ ಅವಧಿ ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಭಾರತದ 51ನೇ CJI ಆಗಿರುತ್ತಾರೆ ಮತ್ತು ಅವರಿಗೆ ಮೇ 13, 2025 ರಂದು 65 ನೇ ವಯಸ್ಸು ತುಂಬಲಿದ್ದು, ನಿವೃತ್ತರಾಗಲಿದ್ದಾರೆ. ನಿವೃತ್ತಿ ಜೀವನಕ್ಕೂ ಮೊದಲು ಆರು ತಿಂಗಳ ಅಧಿಕಾರಾವಧಿಯನ್ನು ಖನ್ನಾ ಹೊಂದಿರುತ್ತಾರೆ.

ಇನ್ನು ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಮಾಹಿತಿ ನೀಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, “ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

https://x.com/arjunrammeghwal/status/1849464974193950825

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!