spot_img
Wednesday, January 22, 2025
spot_img

ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜಾರವರಿಗೆ ‘ವಿದ್ಯಾರತ್ನ’ ಪ್ರಶಸ್ತಿ ಪ್ರದಾನ

ಕುಂದಾಪುರ: ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜಾ ಎ.ಸಿ. ರವರು ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ರುಪ್ಸಾ ಇವರಿಂದ ಕೊಡಲ್ಪಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಅ.21ರಂದು ಬೆಂಗಳೂರಿನ ಜುಬಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಸಚಿವರು ಪ್ರದಾನ ಮಾಡಿದರು.

ಇವರು ಕಳೆದ ೫ ವರ್ಷಗಳಿಂದ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮುಖ್ಯೋಪಾಧ್ಯಾಯಿನಿಯಾಗಿ ಜವಬ್ದಾರಿ ವಹಿಸಿಕೊಂಡ ನಂತರ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಅಧಿಕವಾಯಿತು. ಶಾಲೆಯಲ್ಲಿ ಶಿಸ್ತು, ಮೌಲ್ಯಯುತ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳ ಜೊತೆಗೆ ಕಳೆದ ೭ವರ್ಷಗಳಿಂದ ಶಾಲೆ ಸತತವಾಗಿ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 100 ದಾಖಲೆಯ ಫಲಿತಾಂಶ ಪಡೆಯಲು ಇವರ ಸೇವೆ ಹಾಗು ಪರಿಶ್ರಮವೇ ಕಾರಣ. ಇವರ ಈ ನಿಸ್ವಾರ್ಥ ಸೇವೆ ಹಾಗು ಪರಿಶ್ರಮವನ್ನು ಪರಿಗಣಿಸಿ ರುಪ್ಸಾ ೨೦೨೪ರ ‘ವಿದ್ಯಾರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!